ಭಾನುವಾರ, ಜನವರಿ 19, 2020
26 °C
ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕನ ಅಯ್ಕೆಗೆ ಅಭಿಪ್ರಾಯ ಸಂಗ್ರಹ

ಕಾಂಗ್ರೆಸ್ ವರಿಷ್ಠರ ಭೇಟಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನಸಭೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಲು ಕೇಂದ್ರದ ನಾಯಕರು ಗುರುವಾರ ನಗರಕ್ಕೆ ಭೇಟಿ ನೀಡಲಿದ್ದಾರೆ.

ಮುಖಂಡರಾದ ಮಧುಸೂದನ ಮಿಸ್ತ್ರಿ, ಭಕ್ತಚರಣದಾಸ್ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಮಾಹಿತಿ ಕಲೆಹಾಕಲಿದ್ದಾರೆ. ವಿಧಾನಸಭೆ ಉಪಚುನಾವಣೆ ಸೋಲಿನ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್, ವಿಧಾನಸಭೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮುಖಂಡರು ಭೇಟಿ ನೀಡುತ್ತಿದ್ದು, ದಿನೇಶ್, ಸಿದ್ದರಾಮಯ್ಯ ಅವರನ್ನೇ ಮುಂದುವರಿಸಬೇಕೆ?, ಬದಲಿಸಬೇಕೆ? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು