176 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆರಂಭ

7

176 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆರಂಭ

Published:
Updated:

ಪಾಂಡವಪುರ: ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ರಾಜ್ಯದಲ್ಲಿ 176 ‘ಕರ್ನಾಟಕ ಪಬ್ಲಿಕ್‌ ಸ್ಕೂಲ್‌’ ಆರಂಭಿಸಲಾಗುತ್ತಿದೆ. 1ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಶನಿವಾರ ತಿಳಿಸಿದರು.

ತಾಲ್ಲೂಕಿನ ಚಿನಕುರಳಿ ಗ್ರಾಮದಲ್ಲಿ ಮಾತನಾಡಿದರು. ‘ಪ್ರತಿ ತಾಲ್ಲೂಕಿಗೆ ಒಂದರಂತೆ ಈ ಶಾಲೆ ಮಂಜೂರು ಮಾಡಲಾಗುತ್ತಿದೆ. ಚಿನಕುರಳಿ ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ಈ ಶಾಲೆ ತೆರೆಯಲು ನಿರ್ಧರಿಸಲಾಗಿದೆ. ಸಾಧ್ಯವಾದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ ಮತ್ತು ಯುಕೆಜಿಯನ್ನು ಸಹ ಆರಂಭಿಸಲಾಗುವುದು’ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !