ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಅರ್ಜಿಗಳು ಒಂದೇ ಪೀಠಕ್ಕೆ

Last Updated 19 ಡಿಸೆಂಬರ್ 2019, 19:29 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 1998ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮತ್ತು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮುಂದೆ ಇರುವ ಎಲ್ಲ ಅರ್ಜಿಗಳನ್ನು ಒಂದೇ ಪೀಠಕ್ಕೆ ವರ್ಗಾವಣೆ ಮಾಡು
ವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ’ ಎಂದು ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

‘2016ರ ಜೂನ್‌ 21ರಂದು ಹೈಕೋರ್ಟ್‌ ನೀಡಿದ್ದ ನಿರ್ದೇಶನ ಪಾಲನೆಗೆ ಸರ್ಕಾರ ಮೀನಮೇಷ ಎಣಿಸುತ್ತಿದೆ’ ಎಂದು ದೂರಿ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ವಿಶೇಷ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ಹೈಕೋರ್ಟ್ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರು, ಸಿಎಟಿ ಹಾಗೂ ಕೆಎಟಿಯಿಂದ ಮಧ್ಯಂತರ ಆದೇಶ
ಗಳನ್ನು ಪಡೆದಿದ್ದಾರೆ. ಹೀಗಾಗಿ ಪೂರ್ಣ ಪ್ರಮಾಣದ ಅನುಷ್ಠಾನಕ್ಕೆ ಅಡಚಣೆಯಾಗುತ್ತಿದೆ’ ಎಂದು ವಿವರಿಸಿದರು.

ಇದಕ್ಕೆ ನ್ಯಾಯಪೀಠ, ‘ಈ ಕುರಿತ ಎಲ್ಲ ಅರ್ಜಿಗಳನ್ನೂ ಒಂದೇ ಪೀಠಕ್ಕೆ ವರ್ಗಾಯಿಸುವುದು ಉಚಿತವಲ್ಲವೇ’ ಎಂದು ನಾವದಗಿ ಅವರನ್ನು ಪ್ರಶ್ನಿಸಿತು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ನಾವದಗಿ, ‘ಈ ದಿಸೆಯಲ್ಲಿ ಮುಂದುವರಿಯಲು ಸರ್ಕಾರಕ್ಕೆ ಒಂದಷ್ಟು ಸಮಯಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು 2020ರ ಫೆಬ್ರುವರಿ 7ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT