ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ಮನೆ ಜಲಾವೃತ

Last Updated 30 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವದಿಂದ ಮಧ್ಯಾಹ್ನದವರೆಗೆ ಆಗಾಗ ಜೋರು ಮಳೆಯಾಯಿತು.ಹೊನ್ನಾವರ ತಾಲ್ಲೂಕಿನ ಮಂಕಿ ಸಮೀಪದ ಬಣಸಾಲೆಯಲ್ಲಿ ಹೊಳೆಯ ನೀರು ನುಗ್ಗಿ ಮನೆಗಳು ಜಲಾವೃತಗೊಂಡವು.

ರೋಶನ್ ಮೊಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದುಶಾಲೆಯ ಬಿಸಿಯೂಟದ ಕೋಣೆಗೆ ನೀರು ನುಗ್ಗಿ ತೊಂದರೆಯಾಯಿತು.

ಸ್ಥಳಕ್ಕೆ ಹೊನ್ನಾವರ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾರವಾರ, ಕುಮಟಾ, ಶಿರಸಿಯಲ್ಲೂ ಆಗಾಗ ಜೋರಾಗಿ ಮಳೆಯಾಗಿದ್ದು, ತಗ್ಗು ಪ್ರದೇಶದಲ್ಲಿರುವ ರಸ್ತೆಗಳು, ನಿವೇಶನಗಳಲ್ಲಿ ನೀರು ನಿಂತಿದೆ.

ಕೆಲವು ದಿನಗಳ ಹಿಂದೆ ಕಾಳಿ ನದಿಯ ಹದಿಂದ ತೊಂದರೆಗೊಳಗಾದಕದ್ರಾ, ಮಲ್ಲಾಪುರ ಭಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಪರಿಶೀಲನೆ ನಡೆಸಲಿದ್ದಾರೆ.

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಬೈಲಹೊಂಗಲ ಹಾಗೂ ಖಾನಾಪುರ ತಾಲ್ಲೂಕಿನಲ್ಲಿಯೂ ಬೆಳಗಿನಿಂದ ಮಧ್ಯಾಹ್ನದವರೆಗೂ ಜಿಟಿಜಿಟಿ ಮಳೆ ಸುರಿಯಿತು. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಸಾಧಾರಣ ಮಳೆಯಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಭಾಗದಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಮಡಿಕೇರಿ ಸುತ್ತಮುತ್ತ ಗುರುವಾರ ತಡರಾತ್ರಿಯೂ ಧಾರಾಕಾರ ಮಳೆ ಸುರಿದಿತ್ತು.

ಶಿವಮೊಗ್ಗ ಜಿಲ್ಲೆಯ ಹಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT