ಸೋಮವಾರ, ನವೆಂಬರ್ 18, 2019
20 °C

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ಕೋರಿದ ಕೋವಿಂದ್ ಮತ್ತು ಮೋದಿ

Published:
Updated:

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ.

64ನೇ ಕನ್ನಡ ರಾಜ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹಾಗೂ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ. 

ಕರ್ನಾಟಕದ ಜನತೆಗೆ ಹಾರ್ದಿಕ ಅಭಿನಂದನೆಗಳು ಮುಂಬರುವ ವರ್ಷಗಳಲ್ಲಿ ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಮನಾಥ್ ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ. 

ನರೇಂದ್ರ ಮೋದಿ ಕನ್ನಡ ಭಾಷೆ ಮಾತ್ರವಲ್ಲದೇ ಹಿಂದಿ ಹಾಗೂ ಇಂಗ್ಲಿಷ್‌ನಲ್ಲೂ ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. 

ಪ್ರತಿಕ್ರಿಯಿಸಿ (+)