ಬುಧವಾರ, ಜೂನ್ 3, 2020
27 °C

ರಾಜ್ಯದಲ್ಲಿ 62 ಕೊರೊನಾ ಪ್ರಕರಣ ದೃಢ, 3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 62 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 3 ಮಂದಿ ಮೃತಪಟ್ಟಿದ್ದಾರೆ. ಐವರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕರಣೆ ತಿಳಿಸಿದೆ. ರೈಲಿನಲ್ಲಿ ದೆಹಲಿಗೆ ತೆರಳಿದ್ದ ತುಮಕೂರಿನ 60 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರ ಸಂಪರ್ಕಕ್ಕೆ ಬಂದಿದ್ದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಗುರುವಾರ 55 ಇತ್ತು. ಶುಕ್ರವಾರ ಮತ್ತೆ 7 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.  ದೇಶದಾದ್ಯಂತ ಕೊರೊನಾ ವೈರಸ್ ಸೊಂಕಿಗೆ ಮೃತಪಟ್ಟವರ ಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 740 ತಲುಪಿದೆ. 

ನಿನ್ನೆ (ಮಾರ್ಚ್ 26) ಸಂಜೆ 5 ಗಂಟೆಯಿಂದ ಇಂದು ಬೆಳಿಗ್ಗೆ 8ರ ಅವಧಿಯಲ್ಲಿ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ದೃಢಪಟ್ಟ ಪ್ರಕರಣಗಳ ವಿವರ ಇಂತಿದೆ.

ಪ್ರಕರಣ 56- ದಕ್ಷಿಣ ಕನ್ನಡ ಜಿಲ್ಲೆಯ 10 ತಿಂಗಳ ಗಂಡು ಮಗು. ಈ ಮಗು ಕೋವಿಡ್-19 ಬಾಧಿತ ದೇಶಗಳಲ್ಲಿ ಸಂಚರಿಸಿಲ್ಲ. ಈ ಮಗುವನ್ನು ಪ್ರಸ್ತುತ ದಕ್ಷಿಣ ಕನ್ನಡದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಮಗುವನ್ನು ಅದರ ಪೋಷಕರು ಕೇರಳಕ್ಕೆ ಕೊಂಡೊಯ್ದಿದ್ದರು. ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಮಗುವಿನ ಸಂಪರ್ಕಕ್ಕೆ ಬಂದಿದ್ದ ಆರು ಮಂದಿಯನ್ನು ಗುರುತಿಸಲಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ.

ಪ್ರಕರಣ 57- ಬೆಂಗಳೂರಿನ 20 ವರ್ಷದ ಪುರುಷ. ಕೊಲಂಬೊದಿಂದ ಭಾರತಕ್ಕೆ ಮಾರ್ಚ್ 15ರಂದು ಬಂದಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 58- ಬೆಂಗಳೂರಿನ 25 ವರ್ಷದ ಮಹಿಳೆ. ಲಂಡನ್‌ನಿಂದ ಭಾರತಕ್ಕೆ ಮಾರ್ಚ್ 18ರಂದು ಬಂದಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 59- ಬೆಂಗಳೂರಿನ 35 ವರ್ಷದ ಮಹಿಳೆ. ಈ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಮನೆಯಲ್ಲಿ ಮನೆಕೆಲಸ ಮಾಡುತ್ತಿದ್ದರು. ಬೆಂಗಳೂರು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 60- ತುಮಕೂರು ಜಿಲ್ಲೆಯ 60 ವರ್ಷದ ಪುರುಷ. ರೈಲಿನಲ್ಲಿ ದೆಹಲಿಗೆ ಮಾರ್ಚ್ 13ರಂದು ತೆರಳಿದ್ದರು. ತುಮಕೂರು ಆಸ್ಪತ್ರೆಯಲ್ಲಿ ಇಂದು ಮೃತಪಟ್ಟರು. ಈತನ ಜೊತೆಗೆ ಹತ್ತಿರದ ಸಂಪರ್ಕ ಹೊಂದಿದ್ದ 13 ಮಂದಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 8 ಮಂದಿಯ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಮೂವರು ಆರೋಗ್ಯ ಸಿಬ್ಬಂದಿಗೆ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ.

ಪ್ರಕರಣ 61- ಬೆಂಗಳೂರಿನ 33 ವರ್ಷದ ಮಹಿಳೆ. ಕೊರೊನಾ ಸೋಂಕಿತರ ಮನೆಯಲ್ಲಿ ಮನೆಕೆಲಸ ಮಾಡುತ್ತಿದ್ದರು. ಬೆಂಗಳೂರು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 62- ಉತ್ತರ ಕನ್ನಡ ಜಿಲ್ಲೆಯ 22 ವರ್ಷದ ಪುರುಷ. ದುಬೈನಿಂದ ಹಿಂದಿರುಗಿದ್ದರು. ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು