ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ ದೋಸ್ತಿ ಸರ್ಕಾರದ ಎರಡನೇ ಬಜೆಟ್ 

Last Updated 8 ಫೆಬ್ರುವರಿ 2019, 4:49 IST
ಅಕ್ಷರ ಗಾತ್ರ

ಬೆಂಗಳೂರು: ದೋಸ್ತಿ ಸರ್ಕಾರದ ಎರಡನೇ ಬಜೆಟ್ ಅನ್ನು ಹಣಕಾಸು ಖಾತೆಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೂಮೊದಲು ಬೆಳಗ್ಗೆ 9 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಲಿರುವ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವರು.

ಹನ್ನೊಂದು ಗಂಟೆ ಸುಮಾರಿಗೆ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆಗಲಿದೆ.

ಬಜೆಟ್ ಮಂಡನೆಗೆ ಮುನ್ನ ಸಚಿವ ಸಂಪುಟ ಸಭೆ ನಡೆಸುವುದು ರೂಢಿ.ಸಾಮಾನ್ಯವಾಗಿ ಬಜೆಟ್ ಮಂಡನೆ ದಿನ ಮಾಧ್ಯಮಗೋಷ್ಠಿ ನಡೆಸುವ ಪದ್ಧತಿ ಇಲ್ಲ. ಪ್ರತಿಪಕ್ಷ ಬಿಜೆಪಿ, ಮೈತ್ರಿ ಸರ್ಕಾರದ ಪತನಕ್ಕೆ ಹಾಗೂ ಶಾಸಕರ ರಾಜೀನಾಮೆ ಕೊಡಿಸಲು ತಯಾರಿ ಮಾಡಿಕೊಂಡಿರುವ ಸುಳಿವರಿತ ಮುಖ್ಯಮಂತ್ರಿ ಬಜೆಟ್‌ಗೂ ಮುನ್ನವೇ ಸುದ್ದಿಗೋಷ್ಠಿ ನಡೆಸಿ ಕೆಲವು ರಾಜಕೀಯ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT