ಶುಕ್ರವಾರ, ಜುಲೈ 30, 2021
23 °C

ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ನಿಂದ ಹರಿಪ್ರಸಾದ್, ನಜೀರ್‌ ಅಹಮದ್‌ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BK Hariprasad

ನವದೆಹಲಿ: ರಾಜ್ಯ ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಇದೇ 29ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿರುವ ಪಕ್ಷದ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಗೂ ಪರಿಷತ್‌ನ ಹಾಲಿ ಸದಸ್ಯ ನಜೀರ್‌ ಅಹಮ್ಮದ್ ಅವರನ್ನು ಕಣಕ್ಕಿಳಿಸಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಿದ್ದಾಗಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ತಿಳಿಸಿದ್ದಾರೆ.

ಇದೇ 30ರಂದು ಖಾಲಿ ಆಗಲಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಣಕ್ಕಿಳಿಯಲಿರುವ ಬಿಜೆಪಿಯ   ಅಭ್ಯರ್ಥಿಗಳ ಘೋಷಣೆ ಆಗಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು