ಸ್ಥಳೀಯ ಸಂಸ್ಥೆ: ಮತ ಎಣಿಕೆ ಇಂದು

7
ಮೂರೂ ಪಕ್ಷಗಳಲ್ಲಿ ಕುತೂಹಲ; ಲೋಕಸಭೆ ಚುನಾವಣೆಗೆ ದಿಕ್ಸೂಚಿ?

ಸ್ಥಳೀಯ ಸಂಸ್ಥೆ: ಮತ ಎಣಿಕೆ ಇಂದು

Published:
Updated:

ಬೆಂಗಳೂರು: ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೋಮವಾರ (ಸೆ. 3) ನಡೆಯಲಿದೆ.

ಮಿನಿ ಮಹಾಸಮರ ಎಂದೇ ಪರಿಗಣಿಸಿರುವ ಈ ಚುನಾವಣೆಯ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ಸ್ಥಳೀಯಮಟ್ಟದಲ್ಲಿ ಮತದಾರ ನೀಡುವ ಈ ತೀರ್ಪಿನ ಆಧಾರದಲ್ಲಿ ಲೋಕಸಭಾ ಚುನಾವಣೆಗೆ ತಂತ್ರಗಳನ್ನು ರೂಪಿಸಲು ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಮುಂದಾಗಿವೆ.

ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ದೊಡ್ಡ ಮಟ್ಟದ ಚುನಾವಣೆ ಇದಾಗಿರುವುದರಿಂದ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಲ್ಲಿ ಸಹಜವಾಗಿ ಕುತೂಹಲ ಮೂಡಿಸಿದೆ. ಬಿಜೆಪಿಗೂ ಇದು ಮಹತ್ವದ ಚುನಾವಣೆಯಾಗಿದೆ.

**

ಬೆಳಿಗ್ಗೆ 8‌ಕ್ಕೆ ಎಣಿಕೆ

ನಗರ ಸ್ಥಳೀಯ ಸಂಸ್ಥೆಗಳ ಮತಗಳ ಎಣಿಕೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆಗಳ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8‌ಕ್ಕೆ ಆರಂಭವಾಗಲಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !