ಮಂಗಳವಾರ, ಅಕ್ಟೋಬರ್ 15, 2019
26 °C

ಕೆಎಎಸ್‌ ಅಧಿಕಾರಿ ಪ್ರವೀಣ್‌ ಕುಮಾರ್‌ ನಿಧನ

Published:
Updated:
Prajavani

ಬೆಂಗಳೂರು: ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾಗಿದ್ದ ಹಿರಿಯ ಕೆಎಎಸ್‌ ಅಧಿಕಾರಿ ಪ್ರವೀಣ್‌ ಕುಮಾರ್‌ ಜಿ.ಎಲ್‌ (41) ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿಯವರಾದ ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ ಅವರನ್ನು ಸೆ. 23ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂತ್ಯಕ್ರಿಯೆ ಬುಧವಾರ ಸ್ವಗ್ರಾಮದಲ್ಲಿ ನಡೆಯಲಿದೆ.

2005ನೇ ಸಾಲಿನ ಕೆಎಎಸ್‌ ಅಧಿಕಾರಿಯಾಗಿರುವ ಅವರು ಉಪವಿಭಾಗಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರಡ್ಡಿ ಅವರ ಆಪ್ತ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.

Post Comments (+)