ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕವೂ ಸೇರಿ ಹಲವು ರಾಜ್ಯಗಳು ಕರಡನ್ನು ತಿರಸ್ಕರಿಸಿದ್ದು, ಈ ಬಗ್ಗೆ ಏಕರೂಪದ ಅಧಿಸೂಚನೆ ಹೊರಡಿಸದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಗುರುವಾರ ವಿಡಿಯೋ ಸಂವಾದ ನಡೆಸಿದರು.

‘ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ’ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದೂ ಹೇಳಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಪ್ರಕಾಶ್ ಜಾವಡೇಕರ್ ಅವರು, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ಭರವಸೆ ನೀಡಿದರು.

ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.