ಶನಿವಾರ, ಜುಲೈ 31, 2021
28 °C

ಕಸ್ತೂರಿರಂಗನ್‌ ವರದಿ ತಿರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ:‌ ‘ಕಸ್ತೂರಿರಂಗನ್‌ ಸಮಿತಿಯ ವರದಿಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಅದನ್ನು ಸಚಿವ ಸಂಪುಟದಲ್ಲಿ
ತಿರಸ್ಕರಿಸಲಾಗುವುದು’ ಎಂದು ಅರಣ್ಯ ಸಚಿವ ಆರ್‌. ಶಂಕರ್‌ ಹೇಳಿದರು.

ಬುಧವಾರ ವಿಧಾನ ಪರಿಷತ್‌ನಲ್ಲಿ ಕಸ್ತೂರಿ ರಂಗನ್‌ ವರದಿ ಬಗ್ಗೆ ಐವನ್‌ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ 4ನೇ ಕರಡು ಅಧಿಸೂಚನೆ ಹೊರಡಿಸಿದೆ. 2019ರ ಜ.03ರವರೆಗೆ ಆಕ್ಷೇಪಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಕಸ್ತೂರಿರಂಗನ್‌ ವರದಿ ಅನುಷ್ಠಾನಗೊಳಿಸುವುದರಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿನ ಕೈಗಾರಿಕೆ ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ, ಪ್ರದೇಶದ ಅಭಿವೃದ್ಧಿ, ಜಲ ವಿದ್ಯುತ್ ಮತ್ತಿತರರ ಕಾರ್ಯಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ ತಿರಸ್ಕರಿಸುವುದು ಅನಿವಾರ್ಯ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು