ಬೆಳಗಾವಿ ಕೆಎಟಿ ಪೀಠಕ್ಕೆ ಚಾಲನೆ

7

ಬೆಳಗಾವಿ ಕೆಎಟಿ ಪೀಠಕ್ಕೆ ಚಾಲನೆ

Published:
Updated:

ಬೆಳಗಾವಿ: ಇಲ್ಲಿನ ನೆಹರು ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿಯ (ಕೆಎಟಿ) ಪೀಠಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಚಾಲನೆ ನೀಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಹಾಗೂ ಕಲ್ಬುರ್ಗಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು ತೀರ್ಮಾನ ಕೈಗೊಂಡಿದ್ದರು. ಅದರಂತೆ ಬೆಳಗಾವಿ ಪೀಠ ಸ್ಥಾಪನೆಯಾಗಿ, ಕಾರ್ಯ ಆರಂಭಿಸಿದೆ’ ಎಂದರು.

ಕಲ್ಬುರ್ಗಿಯಲ್ಲಿ ಪೀಠ ಸ್ಥಾಪನೆಯ ಕಾರ್ಯಗಳು ಬಹುತೇಕ ಪೂರ್ಣಗೊಂಡಿದ್ದು, ಮುಂದಿನ 15 ದಿನಗಳಲ್ಲಿ ಉದ್ಘಾಟನೆಯಾಗಲಿದೆ ಎಂದು ಹೇಳಿದರು.

ಕರ್ನಾಟಕ ಆಡಳಿತ ನ್ಯಾಯಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಡಾ.ಕೆ. ಭಕ್ತವತ್ಸಲ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಮುಖ್ಯ ಸಚೇತಕ ಗಣೇಶ ಹುಕ್ಕೇರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ರಿಜಿಸ್ಟ್ರಾರ್ ರಾಜನ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್. ವಿಜಯಭಾಸ್ಕರ್, ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !