ಸೋಮವಾರ, ಜೂಲೈ 6, 2020
27 °C

ಕೆಎಟಿ ಬೆಳಗಾವಿ ಪೀಠ: ಎ.ವಿ.ಚಂದ್ರಶೇಖರ್ ಸದಸ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಡಳಿತ ನ್ಯಾಯಮಂಡಳಿಯ ಬೆಳಗಾವಿ ಪೀಠಕ್ಕೆ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್‌ ಹಾಗೂ ಆಡಳಿತಾತ್ಮಕ ಸದಸ್ಯ ವಿ.ಪಿ.ಬಳಿಗಾರ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ರಿಜಿಸ್ಟ್ರಾರ್‌ ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಪ್ರಕರಣಗಳನ್ನು ಪೀಠವು ವಿಚಾರಣೆ ನಡೆಸಿ ವಿಲೇವಾರಿ ಮಾಡಲಿದೆ.

ಇದೇ 17 ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪೀಠವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಕೆಲವು ಸರ್ಕಾರಿ ಕಚೇರಿಗಳನ್ನು ಉತ್ತರ ಕರ್ನಾಟಕದ ಭಾಗಕ್ಕೆ ಕಳುಹಿಸುವ ಸರ್ಕಾರದ ನಿರ್ಧಾರದ ಭಾಗವಾಗಿ ಆಡಳಿತ ನ್ಯಾಯಮಂಡಳಿಯ ಪೀಠವನ್ನು ಆರಂಭಿಸಲಾಗುತ್ತಿದೆ.

ಒಟ್ಟು 13,428 ಪ್ರಕರಣಗಳು ಬಾಕಿ ಉಳಿದಿವೆ. ಕಲಬುರ್ಗಿ ಪೀಠದಲ್ಲಿ 1506, ಬೆಳಗಾವಿ ಪೀಠದಲ್ಲಿ 2,644 ಮತ್ತು ಬೆಂಗಳೂರು ಪೀಠದಲ್ಲಿ 9,278 ಪ್ರಕರಣಗಳು ಬಾಕಿ ಉಳಿದಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು