ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಟಿ ಹುದ್ದೆ: ಎರಡು ವಾರಗಳಲ್ಲಿ ಭರ್ತಿ ಮಾಡಲು ಕ್ರಮ

Last Updated 11 ಜೂನ್ 2019, 11:09 IST
ಅಕ್ಷರ ಗಾತ್ರ

ಬೆಂಗಳೂರು: "ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ಖಾಲಿ ಇರುವ ನ್ಯಾಯಾಂಗ ಮತ್ತು ಆಡಳಿತ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವ ದಿಸೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

"ಲೋಕಸಭೆ ಚುನಾವಣೆ ಇದ್ದ ಕಾರಣ ಸಚಿವ ಸಂಪುಟದ ಸಭೆ ಈ ವಿಷಯವನ್ನು ಚರ್ಚಿಸಲು ಆಗಿಲ್ಲ" ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮಂಗಳವಾರ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ತಿಳಿಸಿದರು.

ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.

"ಕೆಎಟಿಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು" ಎಂದು ಕೋರಿ ನಗರದ ವಕೀಲರಾದ ಕೆ.ಸತೀಶ್‌ ಭಟ್, ಎಂ.ಲೋಕೇಶ್‌ ಮತ್ತು ಎಂ.ಕೆ.ಪೃಥ್ವೀಶ್‌ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ.

"ಕೆಎಟಿಯಲ್ಲಿ ಸದ್ಯ ಒಬ್ಬ ಅಧ್ಯಕ್ಷರು ಮತ್ತು ಒಬ್ಬ ಆಡಳಿತ ಸದಸ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT