ಕಾವೇರಿ ತಾಲ್ಲೂಕಿಗೆ ಹೋರಾಟ ತೀವ್ರ

7

ಕಾವೇರಿ ತಾಲ್ಲೂಕಿಗೆ ಹೋರಾಟ ತೀವ್ರ

Published:
Updated:

ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣವನ್ನು ಕೇಂದ್ರವಾಗಿರಿಸಿಕೊಂಡು ನೂತನ ‘ಕಾವೇರಿ ತಾಲ್ಲೂಕು’ ರಚನೆ ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ಹೋರಾಟ ಕೇಂದ್ರೀಯ ಸಮಿತಿ ಸೋಮವಾರ ಕರೆ ನೀಡಿದ್ದ ಬಂದ್‌ ಯಶಸ್ವಿ ಆಯಿತು.

ವರ್ತಕರು ಸ್ವಯಂ ಪ್ರೇರಣೆಯಿಂದ ಅಂಗಡಿ ಬಂದ್ ಮಾಡಿ ಬೆಂಬಲ ಸೂಚಿಸಿದರು. ವಕೀಲರು ನ್ಯಾಯಾಲಯ ಕಲಾಪಗಳಿಂದ ದೂರ ಉಳಿದರು. ಹೋರಾಟ ಸಮಿತಿ ಸದಸ್ಯರು, ವಿವಿಧ ಸಂಘ– ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಟೋಲ್‌ಗೇಟ್ ಬಳಿ ಪ್ರತಿಭಟನೆ ನಡೆಸಿದರು. ಕಾವೇರಿ ತಾಲ್ಲೂಕು ಪರವಾಗಿ ಘೋಷಣೆ ಕೂಗಿದರು.

ಕುಶಾಲನಗರ ಹಾಗೂ ಸುಂಟಿಕೊಪ್ಪ ವ್ಯಾಪ್ತಿಯ 19 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಜನರು, ಹೊಸ ತಾಲ್ಲೂಕಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !