ಮಂಗಳವಾರ, ಮಾರ್ಚ್ 21, 2023
29 °C

ಕೆ.ಸಿ.ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಿ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳನ್ನು ಚುರುಕುಗೊಳಿಸಿ ಬರಪೀಡಿತ ಪ್ರದೇಶಗಳ ನೀರಿನ ಬವಣೆ ನೀಗಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದರು.

ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಂಗಳವಾರ ಇಲ್ಲಿ ತಮ್ಮನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

‘ಕೆ.ಸಿ.ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂಎಲ್‌ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಾಗಿದೆ. ಆದರೆ ಪ್ರಸ್ತುತ ಕೇವಲ 284 ಎಂಎಲ್‌ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ. ಹೀಗಾಗಿ ಹೆಚ್ಚಿನ ನೀರು ಸಂಗ್ರಹವಾಗುವಂತೆ ಹಾಗೂ ಎಸ್‌ಟಿಪಿಗಳ ಸಾಮರ್ಥ್ಯ ವರ್ಧನೆಗೆ ಬೆಂಗಳೂರು ಜಲ ಮಂಡಳಿ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು