ಶನಿವಾರ, ಜನವರಿ 18, 2020
22 °C

ಮಂಗಳೂರಿನಲ್ಲಿ ಪ್ರತಿಭಟನೆಗೆ ಯತ್ನಿಸಿದ ಕೇರಳ ಸಂಸದ ಬಿನಯ್ ವಿಶ್ವಂ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರ್ಫ್ಯೂ ಜಾರಿ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದ ಕೇರಳ ಸಿಪಿಎಂ ಸಂಸದ ಬಿನಯ್ ವಿಶ್ವಂ ಹಾಗೂ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಬೆಳಿಗ್ಗೆ ಇಲ್ಲಿನ ಲಾಲ್ ಬಾಗ್ ಬಳಿ ತಮ್ಮ ಬೆಂಬಲಿಗರ ಜೊತೆ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕರ್ಫ್ಯೂ ಜಾರಿಯಲ್ಲಿರುವ ಮಂಗಳೂರಿನಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ. ಈ ಸಮಯದಲ್ಲಿ ಅಲ್ಲಿಯೇ ಕರ್ತವ್ಯದಲ್ಲಿದ್ದ ಪೊಲೀಸರನ್ನೂ ಲೆಕ್ಕಿಸದೆ ಬಿನಯ್ ವಿಶ್ವಂ ಹಾಗೂ ಬೆಂಬಲಿಗರು ಪ್ರತಿಭಟನೆಗಿಳಿದರು. ಪ್ರತಿಭಟನೆ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಹೇಳಿದರೂ ಅವರು ಘೋಷಣೆ ಕೂಗಲು ಆರಂಭಿಸಿದರು. ಕೂಡಲೆ ಅವರನ್ನು ಬಂಧಿಸಿದ ಪೊಲೀಸರು ವಾಹನದಲ್ಲಿ ಕರೆದೊಯ್ದಿದ್ದಾರೆ. ಇದರಿಂದಾಗಿ ಲಾಲ್ ಬಾಗ್ ಸಮೀಪ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. 

ಯಡಿಯೂರಪ್ಪ ಸಭೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಧರ್ಮಗುರುಗಳು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಸಕರು, ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶೋಭಾಕರಂದ್ಲಾಜೆ, ಕ್ರೈಸ್ತ ಧರ್ಮಗುರುಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ನಡೆಯುತ್ತಿರುವ ಸರ್ಕಿಟ್ ಹೌಸ್‌ ಸುತ್ತಲೂ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು