ಮಂಗನಕಾಯಿಲೆ: ಇಬ್ಬರು ಅಧಿಕಾರಿಗಳ ತಲೆದಂಡ

7

ಮಂಗನಕಾಯಿಲೆ: ಇಬ್ಬರು ಅಧಿಕಾರಿಗಳ ತಲೆದಂಡ

Published:
Updated:

ಶಿವಮೊಗ್ಗ: ಮಂಗನಕಾಯಿಲೆ ನಿಯಂತ್ರಿಸುವಲ್ಲಿ ವಿಫಲರಾದ ಆರೋಪದ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ. ವೆಂಕಟೇಶ್, ಪರಿಮಾಣು ಕ್ರಿಮಿ ಸಂಶೋಧನಾ ಕೇಂದ್ರದ ಉಪ ನಿರ್ದೇಶಕ ಡಾ.ರವಿಕುಮಾರ್ ಅವರನ್ನು ಅಮಾನತು ಮಾಡಿ ಇಲಾಖೆಯ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆ ತೀವ್ರ ಸ್ವರೂಪ ಪಡೆದಿದೆ. ರೋಗ ಹರಡದಂತೆ ಮುಂಜಾಗ್ರತೆ ವಹಿಸಲು, ತಡೆಗಟ್ಟಲು ಸೂಕ್ತ ಯೋಜನೆ ರೂಪಿಸಿಲ್ಲ. ಕರ್ತವ್ಯ ಲೋಪ ಎಸಗಿದ್ದಾರೆ. ಹಾಗಾಗಿ, ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಡಿಎಚ್‌ಒ ಡಾ.ರಾಜೇಶ್ ಸುರಗಿಹಳ್ಳಿ ಅವರನ್ನು ವೆಂಕಟೇಶ್ ಅವರ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹಿಂದೆ ಎರಡು ವರ್ಷ ಶಿವಮೊಗ್ಗ ಡಿಎಚ್‌ಒ ಹುದ್ದೆಯಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ.

ಸಂಶೋಧನಾ ಕೇಂದ್ರದ ಜವಾಬ್ದಾರಿಯನ್ನು ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಶಂಕರಪ್ಪ ಅವರಿಗೆ ವಹಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !