ಸೋಮವಾರ, ಜನವರಿ 20, 2020
19 °C

ಮಂಗಳೂರು ಗಲಭೆ, ಗೋಲೀಬಾರ್‌ಗೆ ಖಾದರ್ ಕಾರಣ: ಸಂತೋಷ್ ಆರೋಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆ ಮತ್ತು ಗೋಲಿಬಾರ್‌ಗೆ ಕಾಂಗ್ರೆಸ್‌ ಶಾಸಕ ಯು.ಟಿ.ಖಾದರ್ ಕಾರಣ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

‘ಜನರನ್ನು ಸಿಟ್ಟಿಗೆಬ್ಬಿಸಿದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಮಂಗಳೂರಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಇಬ್ಬರು ಯುವಕರ ಜೀವಹಾನಿಗೆ ನೇರ ಹೊಣೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸಂತೋಷ್‌ ಅವರ ಅಭಿಪ್ರಾಯವನ್ನು ಅಭಿಮಾನಿಗಳು ಮತ್ತು ಬೆಂಬಲಿಗರು ಸ್ವಾಗತಿಸಿದ್ದಾರೆ. ಗೋಲೀಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬಾರದು, ರಾಜ್ಯದಲ್ಲಿ ನಿಮ್ಮ ಸರ್ಕಾರವೇ ಇದೆ ಖಾದರ್ ವಿರುದ್ಧ ಕ್ರಮ ಜರುಗಿಸಿ ಎಂದು ಆಗ್ರಹಿಸಿದ್ದಾರೆ.

ಒಬ್ಬರು ಮಾತ್ರ ಸಂತೋಷ್ ಅವರ ಅಭಿಪ್ರಾಯವನ್ನು ಖಂಡಿಸಿದ್ದಾರೆ. 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು