ನೂಲು ತೆಗೆಯುವ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ಕ್ರಮ: ಸಚಿವ

7

ನೂಲು ತೆಗೆಯುವ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ಕ್ರಮ: ಸಚಿವ

Published:
Updated:
Deccan Herald

ಬಳ್ಳಾರಿ: ‘ಕೈಯಲ್ಲಿ ನೂಲು ತೆಗೆಯುವ ಕಾರ್ಮಿಕರ ಕೂಲಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ ಹೇಳಿದರು.

ನಗರದಲ್ಲಿ ಮಂಗಳವಾರ ರಾಜ್ಯಮಟ್ಟದ ಖಾದಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ನೂಲು ತೆಗೆಯುವವರ ಕೂಲಿ ಉದ್ಯೋಗ ಖಾತ್ರಿಯ ನೌಕರರಿಗಿಂತಲೂ ಕಡಿಮೆ ಇದೆ. ಈ ಬಗ್ಗೆ ಮಾಹಿತಿ ನೀಡುವಂತೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಲಾಗಿದೆ’ ಎಂದರು.

‘ಖಾದಿ ಉತ್ಪನ್ನಗಳನ್ನು ತಯಾರಿಸುವ ಸಂಘ ಸಂಸ್ಥೆಗಳಿಗೆ ನೀಡಲಾಗುವ ಪ್ರೋತ್ಸಾಹ ಧನವನ್ನು ಹೆಚ್ಚಿಸಲಾಗುವುದು. ಖಾದಿ ವಸ್ತುಗಳ ಮಾರಾಟಕ್ಕೆ ಇ –ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸಿದ್ಧತೆಗಳು ನಡೆದಿವೆ’ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವ ಸ್ವಾಮಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !