ಕೆಐಎಯಿಂದ 3.33 ಕೋಟಿ ಮಂದಿ ಪ್ರಯಾಣ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ

ಕೆಐಎಯಿಂದ 3.33 ಕೋಟಿ ಮಂದಿ ಪ್ರಯಾಣ

Published:
Updated:
Prajavani

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 2018–19ರಲ್ಲಿ 3.33 ಕೋಟಿ ಮಂದಿ ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 23.8ರಷ್ಟು ಹೆಚ್ಚಳವಾಗಿದೆ.

ನಿಲ್ದಾಣದ ವಾರ್ಷಿಕ ಸಾರಿಗೆ ವರದಿಯನ್ನು ಸೋಮವಾರ ಬಿಡುಗಡೆ ಮಾಡಲಾಯಿತು.

ದೇಶಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 24.8ರಷ್ಟು ಹೆಚ್ಚಳವಾಗಿದ್ದರೆ, ವಿದೇಶಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 17.5ರಷ್ಟು ಏರಿಕೆಯಾಗಿದೆ.

2019ರ ಜ.20ರಂದು ಒಂದೇ ದಿನದಲ್ಲಿ 109,174 ಮಂದಿ ಪ್ರಯಾಣಿಸಿದ್ದು, ಇದು ವರ್ಷದ ಗರಿಷ್ಠ ಸಂಖ್ಯೆಯಾಗಿದೆ. ಜ.11ರಂದು ಹೆಚ್ಚು ಅಂದರೆ, 750 ವಿಮಾನಗಳು ಹಾರಾಟ ನಡೆಸಿವೆ. ಕಾರ್ಗೊ ಸೇವೆಯಲ್ಲೂ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 11ರಷ್ಟು ಹೆಚ್ಚಳವಾಗಿದೆ. ಒಟ್ಟು 3,86,780 ಮೆಟ್ರಿಕ್‌ ಟನ್‌ ಸರಕು ಸಾಗಣೆ ಮಾಡಲಾಗಿದೆ. 2017–18ರಲ್ಲಿ ಒಂದು ವರ್ಷದಲ್ಲಿ  3,48,403 ಮೆಟ್ರಿಕ್‌ ಟನ್‌ ಸರಕು ಸಾಗಿಸಲಾಗಿತ್ತು.

ಪ್ರಯಾಣಿಕರ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎಎಲ್) ಸಂಸ್ಥೆಯು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಂದಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !