ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ನೇ ದಿನಕ್ಕೆ ಕಾಲಿಟ್ಟ ಕಿಮ್ಸ್ ನೌಕರರ ಪ್ರತಿಭಟನೆ

ನೌಕರರ ಒಕ್ಕೂಟದ ಜತೆಗೆ ಇಂದು ಆಡಳಿತ ಮಂಡಳಿ ಸಭೆ
Last Updated 28 ಮೇ 2019, 19:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಮನಾಗಿ ವೇತನ (6ನೇ ವೇತನ ಆಯೋಗದ ಶಿಫಾರಸಿನಂತೆ) ನೀಡುವಂತೆ ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ನೌಕರರ ಒಕ್ಕೂಟ ಆರಂಭಿಸಿರುವ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದ್ದು, ಆಡಳಿತ ಮಂಡಳಿ ಹಾಗೂ ಪ್ರತಿಭಟನಾ ನಿರತ ನೌಕರರ ಜತೆ ಬುಧವಾರ ಸಂಧಾನ ಸಭೆ ನಡೆಯಲಿದೆ.

‘6ನೇ ವೇತನ ಶ್ರೇಣಿ ವಿಚಾರವಾಗಿ ಆಡಳಿತಾಧಿಕಾರಿಗಳ ಜತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಹಾಗಾಗಿ ಆಡಳಿತ ಮಂಡಳಿ ಜತೆಗೆ ಇನ್ನೊಂದು ಸುತ್ತಿನ ಮಾತುಕತೆಗೆ ಮುಂದಾಗಿದ್ದೇವೆ. ಆಡಳಿತ ಮಂಡಳಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ’ ಎಂದು ಪ್ರತಿಭಟನಾ ನಿರತ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT