ಗುರುವಾರ , ಜೂಲೈ 2, 2020
28 °C

ಕೆ.ಎಂ. ಇಂದಿರೇಶ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಇಲ್ಲಿನ ನವನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ.ಕೆ.ಎಂ.ಇಂದಿರೇಶ ಅವರನ್ನು ನೇಮಕ ಮಾಡಿ ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ಈ ಹಿಂದಿನ ಅವಧಿಯಲ್ಲಿ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ.ಡಿ.ಎಲ್.ಮಹೇಶ್ವರ್ 2018ರ ಜೂನ್ 29ರಂದು ನಿವೃತ್ತರಾಗಿದ್ದರು. ನಂತರ ಒಂದು ತಿಂಗಳ ಅವಧಿಗೆ ಡಾ.ಎಚ್.ಬಿ.ಲಿಂಗಯ್ಯ ಹಂಗಾಮಿ ಕುಲಪತಿಯಾಗಿ ಕೆಲಸ ಮಾಡಿದ್ದರು. ಅದೇ ವರ್ಷ ಜುಲೈ 31ರಂದು ಲಿಂಗಯ್ಯ ಅವರ ನಿವೃತ್ತಿಯ ನಂತರ ಡಾ.ಕೆ.ಎಂ.ಇಂದಿರೇಶ ಹಂಗಾಮಿ ಕುಲಪತಿಯಾಗಿ ನೇಮಕಗೊಂಡಿದ್ದರು.

ರಾಜ್ಯ ಸರ್ಕಾರದಿಂದ ನೇಮಕಗೊಂಡಿದ್ದ ಶೋಧನಾ ಸಮಿತಿ ಶಿಫಾರಸ್ಸಿನ ಮೇರೆಗೆ ಡಾ.ಕೆ.ಎಂ.ಇಂದಿರೇಶ ಅವರನ್ನು ಪೂರ್ಣಾವಧಿಗೆ ಕುಲಪತಿಯಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು