ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಮೈತ್ರಿಗೆ ಮೇಲುಗೈ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ
Last Updated 31 ಅಕ್ಟೋಬರ್ 2018, 19:45 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಕೃತಿ ವಿಕೋಪದ ಕಾರಣಕ್ಕೆ ಮುಂದೂಡಲಾಗಿದ್ದ ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌– ಜೆಡಿಎಸ್ ಮೈತ್ರಿಕೂಟ ಮೇಲುಗೈ ಸಾಧಿಸಿದೆ.

ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಬಿಜೆಪಿಗೆ ತನ್ನ ಭದ್ರನೆಲೆಯಲ್ಲಿ ಹಿನ್ನಡೆ ಆಗಿದೆ.

ಸೋಮವಾರಪೇಟೆ (ಕಾಂಗ್ರೆಸ್‌ –4, ಜೆಡಿಎಸ್‌–3, ಬಿಜೆಪಿ– 3, ಪಕ್ಷೇತರರು–1) ಮತ್ತು ವಿರಾಜಪೇಟೆಯಲ್ಲಿ (ಬಿಜೆಪಿ–8, ಕಾಂಗ್ರೆಸ್‌ –6, ಜೆಡಿಎಸ್‌ –1, ಪಕ್ಷೇತರರು–3) ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕುಶಾಲನಗರದಲ್ಲಿ (ಕಾಂಗ್ರೆಸ್‌–6, ಬಿಜೆಪಿ–6, ಜೆಡಿಎಸ್‌– 4) ಸ್ವಂತ ಬಲದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿದಿದೆ. ಇಲ್ಲಿ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 7, ಕಾಂಗ್ರೆಸ್ 4 ಸ್ಥಾನಗಳನ್ನು ಪಡೆದಿವೆ. ಜಿಲ್ಲೆಯ ಬಂಟ್ವಾಳ‌ ತಾಲ್ಲೂಕು ಪಂಚಾಯಿತಿಯ ಸಂಗಬೆಟ್ಟು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮೋಘಾ ಗ್ರಾಮ ಪಂಚಾಯಿತಿಯ ಎಲ್ಲ 8 ಸ್ಥಾನಗಳಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಅಫಜಲಪುರ ಪುರಸಭೆಯ ವಾರ್ಡ್ ಸಂಖ್ಯೆ 19 ಬಿಜೆಪಿ ಪಾಲಾಗಿದೆ.

ಜಿ.ಪಂ. ಫಲಿತಾಂಶ: ಜಿಲ್ಲಾ ಪಂಚಾಯಿತಿಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 2, ಬಿಜೆಪಿ, ಜೆಡಿಎಸ್‌ ಮತ್ತು ಪಕ್ಷೇತರರಿಗೆ ತಲಾ1 ಸ್ಥಾನ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT