ಭಾನುವಾರ, ಸೆಪ್ಟೆಂಬರ್ 19, 2021
25 °C

ನೈಸರ್ಗಿಕ ವಿಕೋಪ: ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಚುನಾವಣೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೈಸರ್ಗಿಕ ವಿಕೋಪದಿಂದಾಗಿ ಕೊಡಗು ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗಳ ಚುನಾವಣೆಯನ್ನು ಮುಂದಿನ ಆದೇಶದ ವರೆಗೆ ತಡೆಹಿಡಿದಿರುವುದಾಗಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. 

‘ಆಯೋಗವು ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಗಸ್ಟ್‌ 2ರಂದು ವೇಳಾಪಟ್ಟಿ ಪ್ರಕಟಿಸಿತ್ತು. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವುದರಿಂದ ಚುನಾವಣೆ ಮುಂದೂಡುವಂತೆ ಜಿಲ್ಲಾಧಿಕಾರಿ ಕೋರಿದ್ದರು. ಅವರ ಕೋರಿಕೆಯಂತೆ ಪಟ್ಟಣ ಪಂಚಾಯಿತಿಗಳ ಚುನಾವಣೆಯನ್ನು ತತ್‌ಕ್ಷಣದಿಂದ(18 ಆಗಸ್ಟ್‌) ಮುಂದಿನ ಆದೇಶದ ವರೆಗೆ ತಡೆಹಿಡಿಯಲಾಗಿದೆ’ ಎಂದು ಆಯೋಗದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

‘ಆಗಸ್ಟ್‌ 2ರಿಂದ 16ರ ವರೆಗೆ ನಡೆದ ಚುನಾವಣಾ ಪ್ರಕ್ರಿಯೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಅವರು ಉಲ್ಲೇಖಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು