ಕೊಡಗಿನಲ್ಲಿ ನಾಳೆಯೂ ಮುಖ್ಯಮಂತ್ರಿ ಪ್ರವಾಸ; ಬಿಎಸ್‌ವೈ ಭೇಟಿ 

7

ಕೊಡಗಿನಲ್ಲಿ ನಾಳೆಯೂ ಮುಖ್ಯಮಂತ್ರಿ ಪ್ರವಾಸ; ಬಿಎಸ್‌ವೈ ಭೇಟಿ 

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನಾಳೆ(ಆಗಸ್ಟ್ 19) ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಪ್ರವಾಸ ರದ್ದು ಪಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ರಸ್ತೆ ಮೂಲಕ ಮಡಿಕೇರಿಗೆ ತೆರಳಿದ ಮುಖ್ಯಮಂತ್ರಿಗಳು  ಅಲ್ಲಿನ ಗಂಜಿಕೇಂದ್ರವೊಂದಕ್ಕೆ ತೆರಳಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ನಂತರ ಮಡಿಕೇರಿ ನಗರದಲ್ಲಿ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದರು.

ಮಡಿಕೇರಿ ಬಳಿ ಭೂಕುಸಿತದಿಂದ ಸಿಲುಕಿಕೊಂಡಿರುವ ಸುಮಾರು 60 ಜನರನ್ನು ರಕ್ಷಿಸಲು ಮುಖ್ಯಮಂತ್ರಿ ಪ್ರಯಾಣಿಸಿದ ಹೆಲಿಕಾಪ್ಟರ್ ಬಳಸುವ ಉದ್ದೇಶದಿಂದ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಇಂದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ನಾಳೆಯೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್ದಾರೆ.

ಕೊಡಗಿಗೆ ಬಿಎಸ್‌ವೈ ಭೇಟಿ
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅ.19ರಂದು ತೀವ್ರ ನೆರೆಹಾನಿಗೊಳಗಾದ ಕೊಡಗು ಜಿಲ್ಲೆಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಅಹವಾಲು ಆಲಿಸುವರು.

ಇಂದು ರಾತ್ರಿ ಮೈಸೂರು ತಲುಪಿ ನಾಳೆ ಬೆಳಿಗ್ಗೆ ಮಡಿಕೇರಿ ತಲುಪುವರು ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎಸ್.ಶಾಂತಾರಾಮ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 3

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !