ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ‘ಆರೆಂಜ್‌ ಅಲರ್ಟ್‌’ ಘೋಷಣೆ

Last Updated 16 ಜುಲೈ 2019, 18:44 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನಲ್ಲಿ ಇದೇ 18ರಿಂದ 22ರ ತನಕ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಜಿಲ್ಲೆಯಾದ್ಯಂತ ಐದು ದಿನ ‘ಆರೆಂಜ್‌ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಇದೇ 18ರಿಂದ ಮೈಸೂರಿಂದ ಮೋಡ ಬಿತ್ತನೆ ಕಾರ್ಯವು ಆರಂಭಗೊಳ್ಳುವ ಸಾಧ್ಯತೆಯಿದ್ದು, ಕೊಡಗಿನಲ್ಲಿ ಎಚ್ಚರಿಕೆ ವಹಿಸಲಾಗಿದೆ. ಈ ವರ್ಷ ಕೊಡಗಿನಲ್ಲೂ ಮುಂಗಾರು ದುರ್ಬಲವಾಗಿದ್ದು ಭತ್ತದ ನಾಟಿ ಕಾರ್ಯಕ್ಕೂ ಹಿನ್ನಡೆಯಾಗಿದೆ. ನದಿಗಳಲ್ಲೂ ನೀರಿನ ಮಟ್ಟ ಏರಿಕೆ ಕಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT