ಶುಕ್ರವಾರ, ಫೆಬ್ರವರಿ 26, 2021
28 °C

ಕೊಡಗಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ ಜಲಾವೃತ, ಜನಜೀವನ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು‌ ಜನಜೀವನ‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳೂ ಸೇರಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. 

ಭಾಗಮಂಡಲ ಜಲಾವೃತಗೊಂಡಿದೆ. ಈ ವರ್ಷ ಮೊದಲ ಬಾರಿಗೆ ಭಾಗಮಂಡಲದ ಭಗಂಡೇಶ್ವರ ದೇಗುಲದ ಮೆಟ್ಟಿಲು ತನಕ ನೀರು ಬಂದಿದೆ. ನಾಪೋಕ್ಲು- ಅಯ್ಯಂಗೇರಿ- ಭಾಗಮಂಡಲದ ರಸ್ತೆಯ ಮೇಲೆ ಐದು ಐದು ಅಡಿಯಷ್ಟು ನೀರು ಬಂದಿದ್ದು ವಾಹನ ಸಂಚಾರ ಬಂದ್ ಆಗಿದೆ.

ಮಡಿಕೇರಿ,‌ಮಾದಾಪುರ, ಇಗ್ಗೋಡ್ಲು ಹಾಗೂ ಮುಕ್ಕೋಡ್ಲು ಭಾಗದಲ್ಲೂ ಮಳೆ ಆರ್ಭಟಿಸುತ್ತಿದ್ದು ಹಾರಂಗಿ ಒಳಹರಿವು ಏರಿಕೆ ಆಗಿದೆ. 

ಇಂದು ರಜೆ ಘೋಷಣೆ: ಕೊಡಗು ಜಿಲ್ಲೆಯ ಮೂರು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ನೀಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.