ಮಂಗಳವಾರ, ಏಪ್ರಿಲ್ 7, 2020
19 °C

‘ಕೊಲ್ಲೂರು ಪ್ರವಾಸ ಮುಂದೂಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕೋವಿಡ್‌ ಸೋಂಕು ಹರಡುತ್ತಿರುವುದರಿಂದ ಭಕ್ತರು ಒಂದು ವಾರ ಕೊಲ್ಲೂರು ದೇವಸ್ಥಾನ ಪ್ರವಾಸ ಮುಂದೂಡಬೇಕು ಎಂದು ಕೊಲ್ಲೂರು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ವಿದೇಶಗಳು ಸೇರಿದಂತೆ ದೇಶದೆಲ್ಲೆಡೆ ಕೋವಿಡ್ ಸೋಂಕು ವ್ಯಾಪಿಸಿರುವುದರಿಂದ ಭಕ್ತರು ತಾತ್ಕಾಲಿಕವಾಗಿ ಪ್ರವಾಸ ಮುಂದೂಡಬೇಕು ಎಂದು ತಿಳಿಸಿದ್ದಾರೆ.

ಉಡುಪಿಯ ಮಹತೋಭಾರ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸರಳವಾಗಿ ನಡೆಯಲಿದ್ದು, ನಾಟಕ, ಯಕ್ಷಗಾನ ಸೇರಿದಂತೆ ಮನರಂಜನೆ ಕಾರ್ಯಕ್ರಮಗಳು ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)