ಸೋಮವಾರ, ಜೂಲೈ 13, 2020
24 °C

ಬೆಂಗಳೂರು: ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಹಿರಿಯ‌ ಮುಖಂಡರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಲ್ಲಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಹಿರಿಯ ಮುಖಂಡರ ಸಭೆ ಕರೆದಿದ್ದರು.

ಕೊರೊನಾ ಸೋಂಕು ಹರಡುವಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ನಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ ಸ್ಥಿತಿ, ಜನರ ಸಂಕಷ್ಟ, ಅದರ ನಿವಾರಣೆಗೆ ಪಕ್ಷದ ನಿಲುವು, ಪಕ್ಷದ ಸಂಘಟನೆ, ಬಲವರ್ಧನೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ, ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು