ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ: ಶೀಘ್ರ ನೇಮಕಕ್ಕೆ ಮನವಿ, ರಾಹುಲ್‌– ದಿನೇಶ್‌ ಗುಂಡೂರಾವ್‌ ಚರ್ಚೆ

Last Updated 7 ಮಾರ್ಚ್ 2020, 22:09 IST
ಅಕ್ಷರ ಗಾತ್ರ

ನವದೆಹಲಿ: ಕೆಪಿಸಿಸಿ ಪುನಶ್ಚೇತನದ ನಿಟ್ಟಿನಲ್ಲಿ ಶೀಘ್ರವೇ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿರುವ ದಿನೇಶ್‌ ಗುಂಡೂರಾವ್‌ ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಶನಿವಾರ ಇಲ್ಲಿ ಭೇಟಿ ಮಾಡಿ ಚರ್ಚಿಸಿರುವ ಅವರು, ರಾಜ್ಯದಲ್ಲಿ ಪಕ್ಷ ಎದುರಿಸುತ್ತಿರುವ ಸ್ಥಿತಿಗತಿಯ ಕುರಿತು ವಿವರ ನೀಡಿದ್ದಾರೆ. ಅಲ್ಲದೆ, ಕೂಡಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಇತರ ಪದಾಧಿಕಾರಿಗಳನ್ನು ನೇಮಿಸುವಂತೆ ಕೋರಿದ್ದಾರೆ.

ಪಕ್ಷದ ಭವಿಷ್ಯದ ದೃಷ್ಟಿಯಿಂದ ವಿಳಂಬ ಮಾಡದೆ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾಗಿ ದಿನೇಶ್‌ ಅವರು ನಂತರ ಸುದ್ದಿಗಾರರಿಗೆ ತಿಳಿಸಿದರು.

‘ನೇಮಕಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ ಯಾವುದೇ ನಿರ್ಧಾರ ಕೈಗೊಂಡರೂ ರಾಜ್ಯ ಮುಖಂಡರು ಸಹಕರಿಸಲಿದ್ದಾರೆ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಹಾಗೂ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ ಸಂದರ್ಭವೂ ಚರ್ಚಿಸಿರುವುದಾಗಿ ತಿಳಿಸಲಾಗಿದೆ’ ಎಂದು ಅವರು ವಿವರಿಸಿದರು.

ವೇಣುಗೋಪಾಲ್‌ ಅವರೊಂದಿಗೆ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ರಾಹುಲ್‌ ಭರವಸೆ ನೀಡಿದ್ದು, ಸೋಮವಾರದ ನಂತರ ನೇಮಕ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT