ಕೆಪಿಸಿಸಿ ವಿಸರ್ಜನೆ: ಅಧ್ಯಕ್ಷ, ಕಾರ್ಯಾಧ್ಯಕ್ಷ ಯಥಾಸ್ಥಿತಿ

ಭಾನುವಾರ, ಜೂಲೈ 21, 2019
22 °C

ಕೆಪಿಸಿಸಿ ವಿಸರ್ಜನೆ: ಅಧ್ಯಕ್ಷ, ಕಾರ್ಯಾಧ್ಯಕ್ಷ ಯಥಾಸ್ಥಿತಿ

Published:
Updated:

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಅದೇ ಹುದ್ದೆಗಳಲ್ಲೇ ಮುಂದುವರಿಸಿ, ಉಳಿದ ಪದಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ವಿಸರ್ಜಿಸಲು ಎಐಸಿಸಿ ನಿರ್ಧರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಯೂ ಆಗಿರುವ ಕೆ.ಸಿ. ವೇಣುಗೋಪಾಲ್ ಈ ವಿಷಯ ತಿಳಿಸಿದ್ದಾರೆ. ಕೆಪಿಸಿಸಿಯನ್ನು ವಿಸರ್ಜಿಸಲು ಎಐಸಿಸಿ ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಬದಲಾವಣೆ ಮಾಡುವುದಿಲ್ಲ.  ಹಂತಹಂತವಾಗಿ ಉಳಿದ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌

 

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 1

  Sad
 • 2

  Frustrated
 • 1

  Angry

Comments:

0 comments

Write the first review for this !