ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಆಯೋಜಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದಾರೆ. ಹೀಗಾಗಿ, ಪೊಲೀಸರು ಅಡ್ಡಿಪಡಿಸುವಂತಿಲ್ಲ’ ಡಿ.ಕೆ, ಶಿವಕುಮಾರ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಗುರುವಾರ (ಜುಲೈ 2) ನಡೆಯಲಿರುವ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಕೆಲವು ಕಡೆಗಳಲ್ಲಿ ಪೊಲೀಸರು ತೊಂದರೆ ನೀಡುತ್ತಿದ್ದಾರೆ ಎಂಬ ಕರೆಗಳು ಬಂದಿವೆ. ಮುಖ್ಯಮಂತ್ರಿಯವರೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಅನುಮತಿ ನೀಡಿದ್ದಾರೆ. ನಾನು ಈ ಸಂಬಂಧ ಗೃಹ ಸಚಿವ ಮತ್ತು ಪೊಲೀಸ್ ಮಹಾನಿರ್ದೇಶಕರ ಜತೆ ಮಾತನಾಡಿದ್ದೇನೆ. ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ’ ಎಂದರು.

‘ಮುಖ್ಯಮಂತ್ರಿ ಹೇಳಿಕೆಯಲ್ಲಿ ಅನುಮತಿ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಲಿಖಿತ ಅನುಮತಿ ಬೇಕಿಲ್ಲ. ನಿಮ್ಮ ನಿಮ್ಮ ಪ್ರದೇಶಗಳಲ್ಲೇ ಇದ್ದು ಸುದ್ದಿ ವಾಹಿನಿಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿ. ನಾನು ಆಮಂತ್ರಣ ನೀಡಿರುವವರನ್ನು ಬಿಟ್ಟು ಬೇರೆ ಯಾರೂ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬರಬೇಡಿ. ಕಟ್ಟಡ ನಿರ್ವಹಣೆಯನ್ನು ಪೊಲೀಸರು ಹಾಗೂ ಸೇವಾದಳದವರಿಗೆ ವಹಿಸಿದ್ದು, ಅನಗತ್ಯವಾಗಿ ಬಂದು ತೊಂದರೆ ಅನುಭವಿಸುವುದು ಬೇಡ’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

‘ಟಿವಿ ಹಾಗೂ ಜೂಮ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಿರುವವರು ಈ ವಿಷಯದಲ್ಲಿ ಸಹಕಾರ ನೀಡಬೇಕು’ ಎಂದರು.

‘ಎಲ್ಲ ಮಠ ಹಾಗೂ ಸಮುದಾಯದ ಗುರುಹಿರಿಯರು ಆಶೀರ್ವಾದ ಮಾಡಬೇಕು ಎಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ. ಜನರು ಕೂಡ ನಾವು ನೀಡಿರುವ ಸಂಖ್ಯೆಗೆ ಮಿಸ್ ಕಾಲ್ ನೀಡಿ, ಆಶೀರ್ವಾದ ಮಾಡಬಹುದು’ ಎಂದರು.

‘ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವವರಿಗೆ ಪಾಸ್ ನೀಡಿದ್ದು, ನನ್ನ ಮನೆಯಿಂದ ಇಬ್ಬರು ಮಾತ್ರ ಬರುತ್ತಿದ್ದೇವೆ. ಕೆಲವು ನಾಯಕರು, ಹೊರ ರಾಜ್ಯದಿಂದ ನಾಲ್ಕೈದು ಜನರು ಮತ್ತು ಮಾಧ್ಯಮದವರಿಗೆ ಮಾತ್ರ ಪಾಸ್ ನೀಡಲಾಗಿದೆ. ಅವರು ಮಾತ್ರ ಬರಲು ಅವಕಾಶವಿದೆ. ಹೀಗಾಗಿ, ಹೆಚ್ಚಿನ ಜನ ಸೇರುವುದಿಲ್ಲ’ ಎಂದೂ ಅವರು ಸ್ಪಷ್ಟ ಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.