ರೋಷನ್‌ ಬೇಗ್‌ಗೆ ಒಂದು ವಾರದೊಳಗೆ ಉತ್ತರಿಸುವಂತೆ ಕೆಪಿಸಿಸಿ ನೋಟಿಸ್‌ 

ಗುರುವಾರ , ಜೂನ್ 27, 2019
29 °C

ರೋಷನ್‌ ಬೇಗ್‌ಗೆ ಒಂದು ವಾರದೊಳಗೆ ಉತ್ತರಿಸುವಂತೆ ಕೆಪಿಸಿಸಿ ನೋಟಿಸ್‌ 

Published:
Updated:

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಉಸ್ತುವಾರಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ವಿರುದ್ಧ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ರೋಷನ್‌ ಬೇಗ್‌ಗೆ ಕೆಪಿಸಿಸಿ ನೋಟಿಸ್‌ ನೀಡಿದೆ.

ಪಕ್ಷಕ್ಕೆ ಮುಜುಗರವಾಗುವಂತೆ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವುದಕ್ಕೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. 

ಇದನ್ನೂ ಓದಿ... ‘ವೇಣುಗೋಪಾಲ್‌ ಒಬ್ಬ ಬಫೂನ್, ಸಿದ್ದು ಅಹಂಕಾರಿ, ದಿನೇಶ್ ಫ್ಲಾಪ್‌ ಅಧ್ಯಕ್ಷ’

ತಾವು ನೀಡಿದ್ದ ಹೇಳಿಕೆ ಕುರಿತು ಒಂದು ವಾರದೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬೇಗ್‌, ‘ವೇಣುಗೋಪಾಲ್‌ ಅವರಂತಹ ಬಫೂನ್, ಸಿದ್ದರಾಮಯ್ಯ ಅವರಂತಹ ಅಹಂಕಾರಿ ಮತ್ತು ದಿನೇಶ್ ಗುಂಡೂರಾವ್‌ರಂತಹ ಪ್ಲಾಫ್ ಅಧ್ಯಕ್ಷರಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ’ ಎಂದು ವಾಗ್ದಾಳಿ ನಡೆಸಿದ್ದರು.

ಬೇಗ್‌ ನೀಡಿದ್ದ ಹೇಳಿಕೆ ಕಾಂಗ್ರೆಸ್‌ನ ಹಲವು ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.  

ಇದನ್ನೂ ಓದಿ... ಕಾಂಗ್ರೆಸ್‌ ಬಗ್ಗೆ ರೋಷನ್‌ ಬೇಗ್ ಬಹಿರಂಗ ಹೇಳಿಕೆ ಸರಿಯಲ್ಲ: ಯು.ಟಿ.ಖಾದರ್‌

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 8

  Happy
 • 3

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !