ಮಂಗಳವಾರ, ಆಗಸ್ಟ್ 3, 2021
27 °C

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಪದಗ್ರಹಣ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಗುರುವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಕ್ವೀನ್ಸ್‌ ರಸ್ತೆಯಲ್ಲಿರುವ ಪಕ್ಷದ ನೂತನ ಕಟ್ಟಡದಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ, ಕೇರಳ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಹಾಗೂ ರಾಜ್ಯ ನಾಯಕರು ಸೇರಿ 150 ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಬೆಳಿಗ್ಗೆ 10.30ಕ್ಕೆ ಸೇವಾದಳ ಕಾರ್ಯಕರ್ತರ ಗೌರವ ರಕ್ಷೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್‌, ‘ಪದಗ್ರಹಣಕ್ಕೆ ಮುಖ್ಯಮಂತ್ರಿ ಈಗಾಗಲೇ ಅನುಮತಿ ನೀಡಿದ್ದಾರೆ. ಸುದ್ದಿ ಮಾಧ್ಯಮಗಳು ಹಾಗೂ ಜೂಮ್ ಮೂಲಕ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ಕಾರ್ಯಕರ್ತರು ತಾವಿರುವ ಸ್ಥಳಗಳಲ್ಲೇ ಇದ್ದು ವೀಕ್ಷಿಸಬೇಕು. ಆಹ್ವಾನವಿದ್ದವರು ಮಾತ್ರ ಬರಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು