ಶನಿವಾರ, ಜುಲೈ 31, 2021
28 °C

ಕಾವೇರಿ ನದಿಯಲ್ಲಿ ಈಜಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ತಮ್ಮ ಊರಿಗೆ ಸಮೀಪದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಭಾನುವಾರ ಈಜಾಡಿ ಸಂಭ್ರಮಿಸಿದ್ದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಬರೆದುಕೊಂಡಿರುವ ಅವರು, ‘40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ‌ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದ ಮತ್ತು ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು.’ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, ‘‪ಸೂರ್ಯ ಗ್ರಹಣ ಮುಗಿದ ನಂತರ, ನನ್ನ ಕುಟುಂಬದೊಂದಿಗೆ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದೆ’ ಎಂದೂ ತಿಳಿಸಿದ್ದಾರೆ.

40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ‌ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ....

Posted by DK Shivakumar on Sunday, 21 June 2020

ಈ ಚಿತ್ರಗಳನ್ನು 6.4 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವ್ಯಕ್ತಿಯೊಬ್ಬರು, ‘ನಿಮ್ಮ ರಾಜಕೀಯ ಒತ್ತಡ ಎಷ್ಟೇ ಇರಲಿ ಅದರಾಚೆ ನಿಮಗು ಒಂದು ಬದುಕಿದೆ. ಕುಟುಂಬದ ಜೊತೆ ಒಂದಷ್ಟು ಇಂತಹ ಸಮಯಗಳನ್ನು ಹೆಚ್ಚು ಕಳೆಯಿರಿ’ ಎಂದು ಸಲಹೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು