ಸೋಮವಾರ, ಅಕ್ಟೋಬರ್ 21, 2019
26 °C

ಕೆಪಿಎಲ್ ಬೆಟ್ಟಿಂಗ್: ಹವಾಲಾ ದಂದೆ ಬಯಲು

Published:
Updated:

ಬೆಂಗಳೂರು: ‘ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಆರೋಪಿಗಳು ಹವಾಲಾ ಮೂಲಕ ಹಣದ ವ್ಯವಹಾರ ನಡೆಸುತ್ತಿದ್ದರು’ ಎಂದು ನಗರ ಪೊಲೀಸ್‌ ಕಮಿಷನರ್‌ ಭಾಸ್ಕರ ರಾವ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಗುರುವಾರ ಮಾತನಾಡಿದ ಅವರು, ‘ಬಂಧಿತರು ದುಬೈಯಲ್ಲಿರುವ ಬುಕ್ಕಿಗಳ ಜತೆ ಸೇರಿ ಹವಾಲಾ ವ್ಯವಹಾರ ನಡೆಸುತ್ತಿದ್ದರು ಎನ್ನುವ ವಿಷಯ ವಿಚಾರಣೆಯಿಂದ ಗೊತ್ತಾಗಿದೆ’ ಎಂದರು.

‘ಬೆಟ್ಟಿಂಗ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿ 20ಕ್ಕೂ ಹೆಚ್ಚು ‘ಬಿ’ ಗ್ರೇಡ್ ಆಟಗಾರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. 2019ರ ಆವೃತ್ತಿಯ ಕೆಪಿಎಲ್ ಟೂರ್ನಿಯಲ್ಲಿ ಬೆಟ್ಟಿಂಗ್‌ ನಡೆದಿರುವುದು ಖಚಿತವಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಆಟಗಾರರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಹೇಳಿದರು.

‘ಕೆಪಿಎಲ್‍ನಲ್ಲಿ ನಡೆದಿರುವ ಬೆಟ್ಟಿಂಗ್ ಸಂಬಂಧ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಶ್ಫಾಕ್ ತಾರ್‌ ಮತ್ತು ಡ್ರಮ್ಮರ್‌ ಭವೇಶ್ ಬಾಫ್ನಾ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬುಕ್ಕಿಗಳ ಸಂಪರ್ಕ ಹೊಂದಿರುವ ವಿಚಾರವೂ ತನಿಖೆಯಿಂದ ಬಹಿರಂಗವಾಗಿದೆ’ ಎಂದರು.

 

Post Comments (+)