ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: 428 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Last Updated 23 ಡಿಸೆಂಬರ್ 2019, 11:54 IST
ಅಕ್ಷರ ಗಾತ್ರ

ಬೆಂಗಳೂರು:ಕರ್ನಾಟಕ ಲೋಕ ಸೇವಾ ಆಯೋಗವು(ಕೆಪಿಎಸ್‌ಸಿ) ಗೆಜೆಟೆಡ್‌ ಪ್ರೊಬೇಷನರಿ 428 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಆಯೋಗದ ವೆಬ್‌ಸೈಟ್‌ನಲ್ಲಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಹೆಸರು, ವಿಳಾಸ, ಪರೀಕ್ಷೆಯಲ್ಲಿ ಪಡೆದ ಅಂಕಗಳ ಮಾಹಿತಿಯನ್ನು ನೀಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಅದನ್ನು ಪರಿಶೀಲಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

2017ರ ಡಿಸೆಂಬರ್‌ ತಿಂಗಳಲ್ಲಿ ನಡೆದ ಮುಖ್ಯಪರೀಕ್ಷೆಯ ಫಲಿತಾಂಶ ಸಿದ್ಧವಾಗಿದ್ದರೂ ಪ್ರಕಟಣೆ ವಿಳಂಬವಾಗುತ್ತಿದ್ದರಿಂದಕೆಪಿಎಸ್‌ಸಿ ಮತ್ತು ಅಧಿಕಾರಿಗಳ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಅನುಮಾನವೂ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT