ಸೋಮವಾರ, ಸೆಪ್ಟೆಂಬರ್ 20, 2021
23 °C

ಕೆಪಿಎಸ್‌ಸಿ: 9 ಅಭ್ಯರ್ಥಿಗಳಿಗೆ ಸಂದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಅಧಿಕಾರಿಗಳ ನೇಮಕ ಸಂಬಂಧ ಹೈಕೋರ್ಟ್‌ ಆದೇಶದ ಅನ್ವಯ ಹೊಸದಾಗಿ 9 ಮಂದಿಯನ್ನು ಸಂದರ್ಶನಕ್ಕೆ ಆಹ್ವಾನಿಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ.

ಹೈಕೋರ್ಟ್‌ನ 2016ರ ಮೂರನೇ ಆದೇಶದ ಪ್ರಕಾರ, 91 ಅಭ್ಯರ್ಥಿಗಳ ಮೂರನೇ ಮೌಲ್ಯಮಾಪನದ ಅಂಕಗಳನ್ನು ಪರಿಗಣಿಸಿ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಯೋಗದ ಕೇಂದ್ರ ಕಚೇರಿಯಲ್ಲಿ ಇದೇ 16ರಂದು ಬೆಳಿಗ್ಗೆ 10ಕ್ಕೆ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ಸೂಚನಾ ಪತ್ರ ರವಾನಿಸಲಾಗಿದೆ.

ಅಭ್ಯರ್ಥಿಗಳು: ತ್ರಿವೇಣಿ ಬಿ.ಎಂ., ತ್ರಿವೇಣಿ ಎಂ.ಎಂ., ತಿಮ್ಮಣ್ಣ ಗೌಡ ಎ., ಹೇಮಲತಾ ಕೆ., ಪ್ರಭಾವತಿ ಜೆ., ರಾವ್‌ಸಾಬ್‌ ನಾಮದೇವ ಕಾಂಬ್ಳೆ, ಜಬೀನಾ ಪರ್ವಿನ್‌ ಬಳ್ಳಾರಿ, ರಾಜಶೇಖರ್‌, ಮದನ್‌ ಕೆ.ಕೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು