ಬೆಂಗಳೂರು: ‘ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕಾಯಂ ಆದ 417 ಸಹಾಯಕ ಮತ್ತು ಕಿರಿಯ ಎಂಜಿನಿಯರ್‌ಗಳಿಗೆ ನೀಡಲಾಗಿರುವ ಕೃಪಾಂಕ ಪ್ರಮಾಣವನ್ನು 30ರಿಂದ 15ಕ್ಕೆ ಇಳಿಸಿ ಹೊಸ ಪಟ್ಟಿ ಪ್ರಕಟಿಸಬೇಕು’ ಎಂಬ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ನಗರದ ಬಿ.ಕುಮಾರಸ್ವಾಮಿ ಸೇರಿದಂತೆ 18 ಜನರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಗುತ್ತಿಗೆ ಆಧಾರದಲ್ಲಿ 1993–94ರಲ್ಲಿ ಐದು ಜಿಲ್ಲೆಗಳಿಂದ ಒಟ್ಟು 370 ಜನ ಸಹಾಯಕ ಮತ್ತು ಕಿರಿಯ ಅಭಿಂತರರರು ನೇಮಕ ಮಾಡಿಕೊಳ್ಳಲಾಗಿತ್ತು. ಮುಂದುವರಿದು 1998ರಲ್ಲಿ ಈ ಪಟ್ಟಿಗೆ 43 ಜನರನ್ನು ಹಂಗಾಮಿಯಾಗಿ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಗುತ್ತಿಗೆ ಮತ್ತು ಹಂಗಾಮಿ ಆಧಾರದಲ್ಲಿ ಕಾರ್ಯ ನಿರ್ವಹಿಸಿದ್ದ ಒಟ್ಟು 417 ಜನರನ್ನು 2002ರಲ್ಲಿ ನೇರವಾಗಿ ಕಾಯಂ ಮಾಡಲಾಗಿತ್ತು.

ಈ ನೇರ ಕಾಯಮಾತಿಯನ್ನು ನಿರುದ್ಯೋಗಿ ಎಂಜಿನಿಯರ್‌ಗಳು ಕೆಎಟಿಯಲ್ಲಿ ಪ್ರಶ್ನಿಸಿದ್ದರು. ಕೆಎಟಿ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ನಿರುದ್ಯೋಗಿ ಎಂಜಿನಿಯರ್‌ಗಳು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಮೇಲ್ಮನವಿ ಮೂಲಕ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ 2012ರಲ್ಲಿ ಈ ನೇರ ಕಾಯಮಾತಿಯನ್ನು ರದ್ದುಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.