ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಪರೀಕ್ಷೆಗಳು ಮುಂದೂಡಿಕೆ

Last Updated 24 ಏಪ್ರಿಲ್ 2020, 19:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಮೇ, ಜೂನ್‌ನಲ್ಲಿ ನಡೆಸಲು ಉದ್ದೇಶಿಸಿದ ಎಲ್ಲ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಹಾಗೂ ಪ್ರಥಮ ದರ್ಜೆ ಸಹಾಯಕ, ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 106 ಹುದ್ದೆಗಳು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ 'ಎ' ವೃಂದ 54 ಹುದ್ದೆಗಳು ಮತ್ತು ವಿವಿಧ ಇಲಾಖೆಗಳ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಾಕ್‌ಡೌನ್‌ ಅವಧಿ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿ ಪಡಿಸಲಾಗುವುದು’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT