ಮಂಗಳವಾರ, ಏಪ್ರಿಲ್ 7, 2020
19 °C

ಕೆಪಿಎಸ್‌ಸಿ | ಅರ್ಜಿ ಸಲ್ಲಿಸಲು 9ರಿಂದ 16ರವರೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2011ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು, 2017ನೇ ಸಾಲಿನ 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಇದೇ 9ರಿಂದ 16ರವರೆಗಿನ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತಿಳಿಸಿದೆ.

2017ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ಶುಕ್ರವಾರಕ್ಕೆ (ಮಾ.6) ಕೊನೆಗೊಂಡಿದೆ. ಆದರೆ, 2011ನೇ ಸಾಲಿನಲ್ಲಿ 362 ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಈ ಹಿಂದೆ ರಾಜ್ಯ ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ, ಆ ಸಾಲಿನಲ್ಲಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ (ವಯೋಮಿತಿ ಸಡಿಲಿಸಿ) ಮತ್ತೊಮ್ಮೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ನೀಡಿದೆ. ಈ ಅಭ್ಯರ್ಥಿಗಳು ಶುಲ್ಕ ಪಾವತಿಸಲು ಮಾರ್ಚ್‌ 17 ಕೊನೆಯ ದಿನ ಎಂದೂ ಕೆಪಿಎಸ್‌ಸಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು