ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ | ಮುಖ್ಯಪರೀಕ್ಷೆ ಅಂಕ 1,250, ವ್ಯಕ್ತಿತ್ವ ಪರೀಕ್ಷೆ 50ಕ್ಕೆ ಇಳಿಕೆ

Last Updated 6 ಜೂನ್ 2020, 20:14 IST
ಅಕ್ಷರ ಗಾತ್ರ

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ (ಗ್ರೂಪ್‌ ‘ಎ’ ಮತ್ತು ‘ಬಿ’) ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಮುಖ್ಯಪರೀಕ್ಷೆಯ ಒಟ್ಟು ಅಂಕವನ್ನು 1,250ಕ್ಕೆ ಇಳಿಸಲಾಗಿದೆ.

200 ಅಂಕಗಳಿಗೆ ನಡೆಯುತ್ತಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು (ಸಂದರ್ಶನ) 50 ಅಂಕಗಳಿಗೆ ಇಳಿಸಲಾಗಿದೆ. ಅಲ್ಲದೆ, ವ್ಯಕ್ತಿತ್ವ ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸಿದ ಅಂಕ ಶೇ 80 ದಾಟಿದರೆ ಅಥವಾ ಶೇ 40ಕ್ಕಿಂತ ಕಡಿಮೆಯಾದರೆ ಸಂದರ್ಶನ ಮಂಡಳಿ ಸದಸ್ಯರು ಕಾರಣ ದಾಖಲಿಸಬೇಕು ಎಂದೂ ನಿಯಮಕ್ಕೆ ತಿದ್ದುಪಡಿ ಮಾಡಲಾಗಿದೆ.

ಈವರೆಗೆ ಎರಡು ಐಚ್ಛಿಕ ವಿಷಯಗಳೂ (ಪತ್ರಿಕೆ 6 ಮತ್ತು 7) ಸೇರಿ ಏಳು ವಿಷಯಗಳಲ್ಲಿ ಮುಖ್ಯ ಪರೀಕ್ಷೆ ನಡೆಯುತ್ತಿತ್ತು. ಇನ್ನು ಐದು ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಐಚ್ಛಿಕ ವಿಷಯಗಳನ್ನು (ತಲಾ 250 ಅಂಕಗಳ 2 ಪತ್ರಿಕೆ) ಕೈಬಿಡಲು ನಿರ್ಧರಿಸಲಾಗಿದೆ. ಹೀಗಾಗಿ, ಒಟ್ಟು 1,750 ಅಂಕಗಳಿಗೆ ನಡೆಯುತ್ತಿದ್ದ ಮುಖ್ಯಪರೀಕ್ಷೆಯಲ್ಲಿ 500 ಅಂಕ ಕಡಿತಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT