ಸೋಮವಾರ, ಆಗಸ್ಟ್ 8, 2022
22 °C

ದೇವನಹಳ್ಳಿಗೆ ಎತ್ತಿನಹೊಳೆ ನೀರು: ಸಚಿವ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎತ್ತಿನಹೊಳೆ ಯೋಜನೆಯಿಂದ ಜಲಧಾರೆ ಕಾರ್ಯಕ್ರಮದಡಿ ನೀರು ಒದಗಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ವಿಧಾನಸಭೆಯಲ್ಲಿ ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ ಅವರ ಗಮನಸೆಳೆಯುವ ಸೂಚನೆಗೆ ಉತ್ತರ ನೀಡಿ, ತಕ್ಷಣವೇ ₹ 8.90 ಕೋಟಿ ವೆಚ್ಚದಲ್ಲಿ ಕೊಳವೆ ಬಾವಿಗಳನ್ನು ತೋಡಿ ಪೈಪ್‌ಲೈನ್‌ ಅಳವಡಿಸುವ 133 ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಿಗೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ದೇವನಹಳ್ಳಿ ತಾಲ್ಲೂಕಿನಲ್ಲಿ 1,000 ದಿಂದ 1,500 ಅಡಿಯವರೆಗೂ ಕೊಳವೆ ಬಾವಿಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದು ನಾರಾಯಣಸ್ವಾಮಿ ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು