ಶನಿವಾರ, ಸೆಪ್ಟೆಂಬರ್ 25, 2021
22 °C

ಕೆಎಸ್‌ಒಯು: ನಾಳೆ ಪ್ರವೇಶ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) 2019–20ನೇ ಸಾಲಿಗೆ ವಿವಿಧ ಕೋರ್ಸ್‌ಗಳಿಗೆ ಮೇ 5ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತಿದೆ ಎಂದು ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದರು.

‘ಈ ಬಾರಿಯ ನೋಂದಣಿ ಶುಲ್ಕ ಹೆಚ್ಚಿಸಿಲ್ಲ. 2014–15ನೇ ಸಾಲಿನಲ್ಲಿ ಸ್ವೀಕರಿಸುತ್ತಿದ್ದ ಶುಲ್ಕವನ್ನೇ ಉಳಿಸಿಕೊಳ್ಳಲಾಗಿದೆ. ಆದರೆ, ಹೆಚ್ಚು ಕೋರ್ಸ್‌ಗಳನ್ನು ನೀಡುತ್ತಿರುವುದು ವಿಶೇಷವಾಗಿದೆ’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಡಿಪ್ಲೊಮಾ ಕೋರ್ಸ್‌ಗಳನ್ನೂ ಈ ಬಾರಿಯಿಂದ ಪರಿಚಯಿಸಲಾಗುತ್ತಿದೆ. ಸ್ನಾತಕ ಕೋರ್ಸ್‌ಗಳಿಗೆ ₹ 4,350, ಸ್ನಾತಕೋತ್ತರ ಕೋರ್ಸ್‌ಗಳಿಗೆ ₹ 5,800 ಶುಲ್ಕ ಇರಲಿದೆ ಎಂದರು.

ಡಿಪ್ಲೊಮಾ, ಸ್ನಾತಕೋತ್ತರ ಡಿಪ್ಲೊಮಾ ಹಾಗೂ 30 ಕೋರ್ಸ್‌ಗಳಿಗೆ (ಪ್ರಮಾಣ‍ಪತ್ರ) ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಕೋರ್ಸ್‌ಗಳ ವ್ಯಾಪ್ತಿಯು ಸ್ಥಳೀಯವಾಗಿರುವ ಕಾರಣ ಯುಜಿಸಿಮಾನ್ಯತೆ ಅಗತ್ಯವಿಲ್ಲ ಎಂದರು.

ಈ ಬಾರಿ ಪ್ರವೇಶ ಪ್ರಕ್ರಿಯೆಯನ್ನು ಆನ್‌ಲೈನ್ ಮಾಡಲಾಗಿದೆ. www.ksoumysore.karnataka.gov.in ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ತುಂಬಿ, ₹ 300 ಸಂಸ್ಕರಣಾ ಶುಲ್ಕ ಪಾವತಿಸಿದ ಬಳಿಕ ಅರ್ಜಿ ಪಡೆದು ಅವುಗಳನ್ನು ಆಯಾ ವ್ಯಾಪ್ತಿಯ
ಪ್ರಾದೇಶಿಕ ಕೇಂದ್ರಗಳಲ್ಲಿ (ರಾಜ್ಯದ ವಿವಿಧ ಭಾಗಗಳಲ್ಲಿ 17 ಕೇಂದ್ರಗಳು) ಪರಿಶೀಲನೆ ಮಾಡಿಸಿಕೊಂಡು, ಕೋರ್ಸ್‌ ಶುಲ್ಕ ಪಾವತಿಸಬೇಕು. ಆ. 31ಕ್ಕೆ ಪ್ರವೇಶ ಪ್ರಕ್ರಿಯೆ ಮುಕ್ತಾಯವಾಗಲಿವೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು