ಬಸ್‌ ನಿಲ್ದಾಣಗಳಲ್ಲಿ ಧೂಮಪಾನ: ₹2.62 ಕೋಟಿ ದಂಡ ವಸೂಲಿ

ಶುಕ್ರವಾರ, ಜೂನ್ 21, 2019
22 °C

ಬಸ್‌ ನಿಲ್ದಾಣಗಳಲ್ಲಿ ಧೂಮಪಾನ: ₹2.62 ಕೋಟಿ ದಂಡ ವಸೂಲಿ

Published:
Updated:
Prajavani

ಬೆಂಗಳೂರು: 2013ರ ಏಪ್ರಿಲ್‌ನಿಂದ ಈವರೆಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ಧೂಮಪಾನ ಮಾಡಿದ 1.31 ಲಕ್ಷ ಪ್ರಯಾಣಿಕರಿಗೆ ₹2.62 ಕೋಟಿ ದಂಡ ವಿಧಿಸಲಾಗಿದೆ ಎಂದು ನಿಗಮದ ಭದ್ರತಾ ಮತ್ತು ಜಾಗೃತ ನಿರ್ದೇಶಕ ಪಿ.ಎಸ್. ಹರ್ಷ ತಿಳಿಸಿದರು.

ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ವಿಶ್ವ ತಂಬಾಕು ಮುಕ್ತ ದಿನಾಚರಣೆ’ಯನ್ನು ಸಿಗರೇಟು ಮತ್ತು ತಂಬಾಕಿನ ಮೇಲೆ ನೀರು ಸುರಿಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

4,800 ಕೆಮಿಕಲ್‌ಗಳಿಂದ ಒಂದು ಸಿಗರೇಟ್ ತಯಾರಿಸಲಾಗುತ್ತಿದೆ. ಇದು ಆರೋಗ್ಯಕ್ಕೆ ಅತ್ಯಂತ ನಿಕಾರಕ. ಭಾರತದಲ್ಲಿ ‍ಪ್ರತಿವರ್ಷ 70 ಲಕ್ಷ ಜನರು ನೇರವಾಗಿ ತಂಬಾಕು ಸೇವನೆಯಿಂದ, 8ರಿಂದ 10 ಲಕ್ಷ ಜನ ಪರೋಕ್ಷ ಸೇವನೆಯಿಂದ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

‘ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡುವುದು ಅಪರಾಧ. ಉಲ್ಲಂಘಿಸಿದವರಿಗೆ ₹200 ರವರೆಗೆ ದಂಡ ವಿಧಿಸಲಾಗುವುದು. ಪ್ರತಿದಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಸುಮಾರು 1.25 ಲಕ್ಷ ಜನ ಪ್ರಯಾಣಿಸುತ್ತಾರೆ. ಇಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, ಮಾರಾಟ, ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ’ ಎಂದು ನಿಗಮದ ಸಿಬ್ಬಂದಿ ಮತ್ತು ಪರಿಸರ ವಿಭಾಗದ ನಿರ್ದೇಶಕ ಪಿ.ಆರ್. ಶಿವಪ್ರಸಾದ್ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !