ಕರುಣಾನಿಧಿ ನಿಧನ: ತಮಿಳುನಾಡಿಗೆ ಬಸ್‌ ಸಂಚಾರ ಸ್ಥಗಿತ

7

ಕರುಣಾನಿಧಿ ನಿಧನ: ತಮಿಳುನಾಡಿಗೆ ಬಸ್‌ ಸಂಚಾರ ಸ್ಥಗಿತ

Published:
Updated:

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ (94) ಮಂಗಳವಾರ ಸಂಜೆ ನಿಧನರಾದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಸಂಜೆ 6.10ಕ್ಕೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಅಸುನೀಗಿದರು.

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ನಿಧನರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಮಂಗಳವಾರ ಸಂಜೆಯಿಂದ ಸ್ಥಗಿತಗೊಳಿಸಲಾಗಿದೆ.

ಪ್ರತಿನಿತ್ಯ ಚೆನ್ನೈಗೆ 87 ಬಸ್‌ಗಳು ಸೇರಿದಂತೆ 432 ಬಸ್‌ಗಳು ಸಂಚಾರ ನಡೆಸುತ್ತವೆ. ರಾತ್ರಿ ಸಂಚಾರ ನಡೆಸುವ ಸುಮಾರು 160 ಬಸ್‌ಗಳ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !