ಭಾನುವಾರ, ಆಗಸ್ಟ್ 9, 2020
23 °C

ಅರಸೀಕೆರೆ: ಕೆಎಸ್‌ಆರ್‌ಟಿಸಿ ಬಸ್‌–ವ್ಯಾನ್‌ ಡಿಕ್ಕಿ; ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕೆಎಸ್ಆರ್‌ಟಿಸಿ ಸಾರಿಗೆ ಬಸ್ ಹಾಗೂ ಮಾರುತಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. 

ಅರಸೀಕೆರೆ ತಾಲ್ಲೂಕು ದೇವರಸನಹಳ್ಳಿ ಬಳಿ ತಡರಾತ್ರಿ 1:30ರ ಸುಮಾರಿಗೆ ಅಪಘಾತ ಸಂಭವಿಸಿದೆ. 

ಮುಜೀಬಾ(53), ಮಹಮದ್ ಸಾಧಿಖ್(22), ಮುಷ್ಕಾನ್(19) ಮೃತರು.  

ತುಮಕೂರು ಜಿಲ್ಲೆ ಮಧುಗಿರಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳುಗಳಾದ ಶಾಲಿನ್ ಭಾನು, ಇಮ್ರಾನ್ ಅಹಮದ್, ಶಾಲಿನ್ ತಾಜ್, ಮೊಹಮ್ಮದ್ ಶಾಲಿನ್ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು