ಗುರುವಾರ , ಫೆಬ್ರವರಿ 20, 2020
28 °C

ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗೆ ಆಹುತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಗಿಡ್ಡೋಬನಹಳ್ಳಿ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಮಂಗಳವಾರ ಬೆಳಿಗ್ಗೆ ಬೆಂಕಿಗೆ ಅಹುತಿಯಾಗಿದೆ.

ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಅವಘಡಕ್ಕೆ ಸಿಲುಕಿದೆ. ಬಸ್ನಲ್ಲಿ ಇದ್ದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದಾರೆ. ಕ್ಷಣಾರ್ಧದಲ್ಲಿ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಇದರಿಂದ ಸಂಭವನೀಯ ಭಾರಿ ದುರಂತ ತಪ್ಪಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು